ಗಜಮುಖನೆ ಗಣಪತಿಯೇ ನಿನಗೆ ವಂದನೆ ನಂಬಿದವರ ಪಾಲಿನ ಕಲ್ಪತರು ನೀನೆ ||2||
ಭಾದ್ರಪದ ಶುಕ್ಲದ ಚೌತಿಯಂದು ನೀ ಮನೆಮನೆಗೂ ದಯಮಾಡಿ ಹರಸು ಎಂದು
ನಿನ್ನ ಸನ್ನಿಧಾನಕ್ಕೆ ತಲೆಬಾಗಿ ಕೈಯ್ಯಮುಗಿದು ಬೇಡುವಾ ಭಕ್ತರಿಗೆ ನೀ ದಯಾಸಿಂಧು
ಗಜಮುಖನೆ ಗಣಪತಿಯೇ ನಿನಗೆ ವಂದನೆ ನಂಬಿದವರ ಪಾಲಿನ ಕಲ್ಪತರು ನೀನೆ....
ಪಾರ್ವತಿ ಪರಶಿವನ ಪ್ರೇಮ ಪುತ್ರನೆ ಪಾಲಿಸುವ ಪರದೈವ ಬೇರೆ ಕಾಣೆ
ಪಾಪದ ಪಂಕದಲಿ ಪದುಮ ಎನಿಸು ಎನ್ನ ಪಾದ ಸೇವೆಯೊಂದೇ ಜನ್ಮ ಸಾಧನ
ಗಜಮುಖನೆ ಗಣಪತಿಯೇ ನಿನಗೆ ವಂದನೆ ನಂಬಿದವರ ಪಾಲಿನ ಕಲ್ಪತರು ನೀನೆ....
ಈರೇಳು ಲೋಕದ ಅನು ಅನುವಿನ ಇಹಪರದ ಸಾಧನೆಗೆ ಕಾರಣ
ನಿನ್ನೊಲುಮೆ ನೋಟದ ಒಂದು ಹೊನ್ನ ಕಿರಣ ನೀಡಿದರೆ ಸಾಕಯ್ಯ ಜನ್ಮ ಪಾವನ
ಗಜಮುಖನೆ ಗಣಪತಿಯೇ ನಿನಗೆ ವಂದನೆ ನಂಬಿದವರ ಪಾಲಿನ ಕಲ್ಪತರು ನೀನೆ ||2||